Showing posts with label ಸಾಲದೆ ನಿನ್ನದೊಂದು ದಿವ್ಯನಾಮ ಅಕಾಲ ಮೃತ್ಯುವಿನ ಗಂಟಲಗಾಣ ಹರಿಯೆ neleyadikeshava. Show all posts
Showing posts with label ಸಾಲದೆ ನಿನ್ನದೊಂದು ದಿವ್ಯನಾಮ ಅಕಾಲ ಮೃತ್ಯುವಿನ ಗಂಟಲಗಾಣ ಹರಿಯೆ neleyadikeshava. Show all posts

Wednesday, 1 September 2021

ಸಾಲದೆ ನಿನ್ನದೊಂದು ದಿವ್ಯನಾಮ ಅಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ankita neleyadikeshava

..

ಸಾಲದೆ ನಿನ್ನದೊಂದು ದಿವ್ಯನಾಮ - ಅ-ಕಾಲ ಮೃತ್ಯುವಿನ ಗಂಟಲಗಾಣ ಹರಿಯೆ ಪ


ರಣದೊಳಗೆ ಅಂಗಾಂಗ ಖಂಡತುಂಡಾಗಿ ಪ್ರತಿರಣವನುತ್ತರಿಸಿ ಮರಣವ ತಾಳಿರೆಪ್ರಣವ ಗೋಚರ ನೀನು ಗೋಚರಿಸಿ ಬಂದೆನ್ನಹೆಣಕೆ ಪ್ರಾಣವ ಪ್ರಯೋಗಿಸಿದಂತರಾತ್ಮ1


ಕುಂತದಿಂ ತೂಂತುಗೊಂಡೆನ್ನ ಬೆನ್ನಿಂದಿಳಿವಸಂತತ ನೆತ್ತರನೊರಸಿ ಬಿಸುಟೆತಿಂತ್ರಿಣಿಯ ಮರದಡಿಯೆ ಹಾವು ಕಡಿದೊರಗಿರಲುಮಂತ್ರಿಸಿ ಮನೆಗೆ ಕಳುಹಿದೆ ಗರುಡಗಮನ 2


ಕ್ಷೀಣ ದೇಹವ ಬಿಡುವೆನೆಂದು ಪಾಡಂಬಟ್ಟುತ್ರಾಣದಲಿ ಗರಳ ತೈಲವ ಸೇವಿಸೆವೇಣುನಾದದಲಿ ಹಣೆಯನೇವರಿಸಿ ಪಂಚಪ್ರಾಣ ಪ್ರತಿಷ್ಠೆಯ ಮಾಡಿದೆ ಮಹಾತ್ಮ 3


ತಮ್ಮ ಹವಣನರಿಯದೆ ಕೊಬ್ಬಿದ ಪಿಶಾಚಿಗಳುಎಮ್ಮ ಮನೆಗೊಂದೆ ಸಮ ಕಲ್ಲಲಿಟ್ಟುಹೆಮ್ಮಕ್ಕಳ ಬಾಧಿಸುವುದನು ಕಂಡುಬೊಮ್ಮಜಟ್ಟಿಗರ ಶಿರವರಿದೆ ನರಹರಿಯೆ 4


ಓದಿ ಹೇಳಿದರೊಂದು ಕಥೆಯಾಗುತಿದೆ ಮಹಾಂಬೋಧಿಶಯನನೆ ವೇದಶಾಸ್ತ್ರ ಮುಖದಿಬಾಧಿಸುವ ದುರಿತಾಗ್ನಿಗಂಬು ಶ್ರೀ ಕಾಗಿನೆಲೆಯಾದಿಕೇಶವನ ನಾಮ ಸಂಕೀರ್ತನ 5

***