ಕಾಖಂಡಕಿ ಶ್ರೀ ಮಹಿಪತಿರಾಯರು
ಸಾವಧಾನವೆಂದು ಶ್ರುತಿಸಾರುತಿದೆಕೋ ಭಾವದಿಂದಲಿ ಮನವೆ ನೀ ಎಚ್ಚತ್ತುಕೋ ಪ
ಭವದ ನಿದ್ರಿಗಳೆದು ಸಾವದಾನವಾಗೋ ನಿವಾಂತ ಕೂಡಲಿಕ್ಯದ ಬಲು ಬೆಳಗೋ ವಿವೇಕವೆಂಬ ಸ್ಮರಣೆ ಇದೆ ನಿನಗೋ ಭವಹರ ಗುರುವಿಗೆ ಶರಣಯುಗೋ 1
ಮುಚ್ಚಿದ ಮಾಯದ ಮುಸಕ್ಹಾರಿಸುವದೆ ಙÁ್ಞನ ಎಚ್ಚತ್ತಮ್ಯಾಲಿದೆ ಖೂನ ಸುವಸ್ತು ಧ್ಯಾನ ಅಚ್ಯುತಾನಂತನ ಕಾಂಬುದನುಸಂಧಾನ ಅಚಲವೆಲ್ಲಕ್ಕಿದೆ ಸುಪಥಸಾಧನ 2
ಬೆಳಗಿನ ಬೆಳಗಿದೆ ಬಲು ನಿಶ್ಚಲ ಒಳಗೆ ಹೊರಗೆ ತೋರುವ ಆನಂದ ಕಲ್ಲೋಳ ಹೊಳೆವ ಮಹಿಪತಿಸ್ವಾಮಿ ಪ್ರಭೆಯು ಬಹಳ ಬೆಳಗಾಯಿತು ಗುರುದಯ ಪ್ರಬಳ 3
***