Showing posts with label ಸುಲಿದ ಬಾಳೆ ಹಣ್ಣು ಸುಟ್ಟು prasanna. Show all posts
Showing posts with label ಸುಲಿದ ಬಾಳೆ ಹಣ್ಣು ಸುಟ್ಟು prasanna. Show all posts

Friday, 27 December 2019

ಸುಲಿದ ಬಾಳೆ ಹಣ್ಣು ಸುಟ್ಟು ankita prasanna

ವಿದ್ಯಾಪ್ರಸನ್ನತೀರ್ಥರು

ಸುಲಿದ ಬಾಳೆ ಹಣ್ಣು ಸುಟ್ಟು ತಿನ್ನಬೇಡಿರೊ
ಹಳೆಯ ಜನರ ಅನುಭವಗಳ ಹಳಿಯಬೇಡಿರೊ
ಬಿಳಿಯ ವಸ್ತುವೆಲ್ಲ ಕ್ಷೀರವಲ್ಲ ಕಾಣಿರೊ
ಥಳಥಳಿಸುವುದೆಲ್ಲ ರಜತವಲ್ಲ ಕಾಣಿರೊ
ಸಿರಿಯು ಬಂದ ಕಾಲದಲ್ಲಿ ಮೆರೆಯಬೇಡವೋ
ಶಿರವು ಗಟ್ಟಿಯೆಂದು ಕಂಬ ಗುದ್ದಬೇಡವೊ
ಮನಕೆ ತುಷ್ಟಿಕೊಡದ ಕಾರ್ಯಗಣನೆ ಬೇಡವೊ
ಅನುವಿನಲ್ಲಿ ಪಿಡಿದ ಕಾರ್ಯ ಕೊನೆಯಗಾಣಿಸೊ
ಹಾವು ಕೊಂದು ಹದ್ದುಗಳಿಗೆ ಹಾಕಬೇಡವೊ
ಗೋವು ಕೊಂದು ಪಾದರಕ್ಷೆ ದಾನಬೇಡವೊ 10

ಅರಿಯದ ಜನರಲ್ಲಿ ಅಂತರಂಗಬೇಡವೊ
ಪರರ ಗೋಪ್ಯ ತಿಳಿದರೆ ಬಹಿರಂಗಬೇಡವೊ
ನಗುವ ಜನರ ಮುಂದೆ ಜಂಭ ಕೊಚ್ಚಬೇಡವೊ
ರಗಳೆ ರಂಪದಿಂದ ಪರರ ಒಲಿಸಬೇಡವೊ
ಗೆದ್ದರಾ ಎತ್ತು ಬಾಲವನ್ನು ಹಿಡಿಯಬೇಡವೊ
ಒದ್ದರೆ ಅದು ಹಲ್ಲುಗಳನು ಕಿರಿಯಬೇಡವೊ
ಮೂರ್ಖ ಜನಗಳಲ್ಲಿ ವಾದ ಮಾಡಬೇಡವೊ
ಮಕ್ಕಳೆದುರಿನಲ್ಲಿ ಗ್ರಾಮ್ಯವಚನ ಬೇಡವೊ
ಬಳಿಕ ಮಾತನಾಡುವನು ಗೆಳೆಯನಲ್ಲಯ್ಯ
ಕುಳಿತು ತಿನ್ನುವವನು ಸಾಹುಕಾರನಲ್ಲಯ್ಯ 20

ಗಂಟು ಜಗಳ ಕದನಗಳಲಿ ತಂಟೆಬೇಡಯ್ಯ
ನಂಟರಿಷ್ಟರಲ್ಲಿ ಭಂಟನಾಗಬೇಡಯ್ಯ
ನಾಕು ಜನರ ಮಾತ ಮೀರಿ ನಡೆಯಬೇಡÀಯ್ಯ
ಪೋಕರಿ ಜನಗಳಲಿ ಮೂಕ ಬದಿರನಂತಿರೊ
ಕಾಲದಲ್ಲಿ ಕೆಲಸಮಾಡಿ ಮುಗಿಸೆಲೊ
ನಾಳೆ ನಾಳೆಯೆಂಬ ಕೆಲಸ ಹಾಳು ಕಾಣಿರೊ
ಬಿಂಕದಿಂದ ಹರಿಗುರುಗಳ ಮರೆಯಬೇಡಯ್ಯ
ಸಂಕಟ ಬಂದಾಗ ವೆಂಕಟೇಶ ಬರುವನೆ
ಸಾಲ ಸೋಲ ಮಾಡಿ ದಾನ ಧರ್ಮ ಬೇಡಯ್ಯ
ಕೇಳದಿರಲು ನೀತಿ ಹೇಳ ಹೋಗಬೇಡಯ್ಯ 31
ಪರರು ನೋಯುವಂಥ ಮಾತನಾಡಬೇಡಯ್ಯ
ಉರಿವ ಒಲೆಗೆ ಉಪ್ಪುಕಾಳನೆರಚಬೇಡಯ್ಯ
ನೆರೆಯು ಬಾಳುತಿರಲು ನೋಡಿ ಕರಗಬೇಡಯ್ಯ
ಬರಿದೆ ಅಯ್ಯೊ ಪಾಪವೆನಲು ಮರುಕವಲ್ಲವೊ
ದುರುಳ ಜನಗಳಲ್ಲಿ ಸರಳನಾಗಬೇಡಯ್ಯ
ಹರಿಯ ಭಜನೆಯಲ್ಲಿ ಮನದಿ ನಾಚಬೇಡವೊ
ತಿರುಕನಂತೆ e್ಞÁನದ ಭಿಕ್ಷೆಯನು ಬೇಡೆಲೊ
ತುರುಕನಂತೆ ಕಾಮದ ತಲೆ ಬಡಿದು ಜೀವಿಸೊ
ಸಜ್ಜನಗಳು ಸಮ್ಮತಿಸುವ ಮಾರ್ಗದಲಿ ನಡಿ
ದುರ್ಜನಗಳು ಪೇಳಿ ತೋರಿದೆಲ್ಲವನು ಬಿಡಿ40

ಫಲದ ಚಿಂತೆಯಿಲ್ಲದಂತೆ ಧರ್ಮಗಳಿಸಿರೊ
ಫಲವು ಹರಿಯಧೀನ ಕೆಲಸ ಮಾತ್ರ ನಿನ್ನದೊ
ಧ್ಯಾನ ಮಾಡದಿರಲೊ ಮನದಿ ದುಷ್ಟ ವಿಷಯದ
ಧ್ಯಾನದಿಂದ ವಿಷಯದಲ್ಲಿ ಸಂಗ ಬರುವುದೊ
ಸಂಗದಿಂದ ದುಷ್ಟಭೋಗ ಕಾಮ ಬರುವುದೊ
ಭಂಗವಾದ ಕಾಮದಿಂದ ಕೋಪ ಬರುವುದೊ
ಕೋಪದಿಂದ ಮನದಲಿ ವ್ಯಾಮೋಹ ಬರುವುದೊ
ಈ ಪರಿಮೋಹದಲಿ ಸ್ಮರಣೆ ನಾಶಪಡುವುದು
ಸ್ಮøತಿಯು ತಪ್ಪಿದವನ ಬುದ್ಧಿಮೃತಿಯು ಪೊಂದಲು
ಕ್ಷಿತಿಯೊಳವಗೆ ಸರ್ವನಾಶವೆಂದು ನುಡಿಯಿದೆ 50
e್ಞÁನಕೆ ಸಮ ಸಂಪತ್ತಿಲ್ಲ ಜನಕೆ ಲೋಕದಿ
ಮೌನಕೆ ಸಮ ಗುಹ್ಯಕೆ ಪಾಲಕರಿಲ್ಲವೊ
e್ಞÁನ ಸರ್ವಕರ್ಮಗಳನು ದಹಿಸಿಬಿಡುವುದೊ
e್ಞÁನದಿಂದ ಪರಮಶಾಂತಿ ಪಡೆಯುಬಹುದೆಲೊ
ಚಿರತನ ವರ್ಣಾಶ್ರಮಗಳ ಧರ್ಮ ಬಿಡದಿರೊ
ಪರರ ನೋಡಿ ವೇಷಗಳನು ಧರಿಸಬೇಡವೊ
ಮಿತಿಯ ಮೀರಿ ಭೋಜನವನು ಮಾಡಬೇಡವೊ
ಅತಿಯ ನಿದ್ರೆಯಲ್ಲಿ ಕಾಲ ಕಳೆಯಬೇಡವೊ
ಲೋಕವ ಭಯಪಡಿಸಬೇಡ ನಡೆನುಡಿಗಳಲಿ
ಲೋಕಕೆ ಭಯಪಡಲಿಬೇಡ ಧರ್ಮ ಪಥದಲಿ 60

ಶತುಮಿತ್ರರಲ್ಲಿ ಒಂದೆ ಭಾವ ಪಡೆಯೆಲೊ
ಸ್ತೋತ್ರ ನಿಂದೆಗಳಿಗೆ ಹಿಗ್ಗಿ ಕುಂದಬೇಡವೊ
ಭಕ್ತಜನರ ನಡೆನುಡಿಗಳ ನಿಂದಿಸದಿರೆಲೊ
ಯುಕ್ತರವರು ಹಿರಿಯ ದಯಕೆ ಪಾತ್ರರಿವರೊ
ಜಗವು ಸತ್ಯ ಬಗೆ ಬಗೆಯಲಿ ಸೊಗಸ ನೋಡೆಲೊ
ಜಗಕೆ ಕರ್ತನೋರ್ವಗೆ ಕೈ ಮುಗಿದು ಬೇಡೆಲೊ
ದೇಶಕಾಲ ಪಾತ್ರವರಿತು ದಾನ ಮಾಡೆಲೊ
ಆಸೆ ಮೋಸಗಳಿಗೆ ಮನವ ಲೇಸು ಕೊಡದಿರೊ
ಪರರ ಮನವು ಕೆದರದಂತೆ ನಿಜಹಿತ ನುಡಿಯು
ಗುರುತರ ವಾಚನಿಕ ತಪವ ಮರೆಯಬೇಡವೊ 70
ಸರ್ವಕರ್ಮ ಫಲಗಳನ್ನು ಬಿಡುವನೆ ಯತಿಯು
ಗರ್ವಮತ್ಸರಾದಿಗಳನು ಬಿಡುವುದೆ ಮತಿಯು
ಶರಣು ಹೊಡೆಯೊ ಕರುಣಮಯನ ಚರಣಯುಗಳದಿ
ಕರಗತವಾಗುವುದು ನಿನಗೆ ಇಹಪರ ಸುಖವು
ಮಮತೆ ಬಿಟ್ಟು ಜಗದಿ ತಗಲಿ ತಗಲದೆ ಇರೆಲೊ
ಕಮಲಪತ್ರಗಳಲಿ ಜಲದ ಕಣಗಳ ತೆರದಿ
ಶುದ್ಧ ಧರ್ಮಲೇಶವು ತಲೆ ಕಾಯಬಲ್ಲದೊ
ಪದ್ಮನಾಭ ಜನರ ಚಿತ್ತಶುದ್ಧಿ ನೋಡುವ
ನಾನೆ ಬ್ರಹ್ಮನೆಂಬ ವಾದ ಬಾಳಬಲ್ಲದೆ
ತಾನೆ ಬೀಳಲಿರುವ ಮರಕೆ ಕೊಡಲಿ ಏತಕೆ 80

e್ಞÁನತೀರ್ಥಗಳಲಿ ಮುಳುಗಿ ಸ್ನಾನ ಮಾಡೆಲೊ
e್ಞÁನಕೆ ಜ್ಯೋತಿಗಳ ಬೆಳಕು ಕಾಣುತಿರುವುದೊ
ದಾರುಣ ಸಂಸಾರ ಜಲದಿ ಪಾರುಗಾಣಲು
ಧೀರನಾಗಿ ಈಜುವವಗೆ ತಾರಣ ಸುಲಭ
ತಲೆಯ ಮೇಲೆ ಕೈಯನಿಟ್ಟು ಕೂಡ ಬೇಡವೊ
ಬೆಳಸಿದಂತೆ ತರುಲತೆಗಳು ಫಲಕೊಡುವುದೊ
ಮುಂದೆ ಇಟ್ಟ ಹೆಜ್ಜೆಗಳನು ಹಿಂದೆಗೆಯದಿರೊ
ಮಂದಿಗಳಿಗೆ ಫಲದಲಿ ಸಂದೇಹ ಬೇಡವೊ
ಹುಳಿಯ ರಕ್ತವಿರುವತನಕ ತಲೆಯು ಬಾಗದು
ಹಳೆಯದಾಗಿ ಬಗ್ಗಿದಾಗ ಕಾಲ ಸಾಲದೊ 90

ಪರರ ನುಡಿಗಳನ್ನು ಕದ್ದು ಕೇಳಬೇಡವೊ
ಅರಿತು ನಿನ್ನ ಹರಿಯು ಗುದ್ದಿ ಬುದ್ಧಿ ಕಲಿಸುವ
ಚಾಡಿಯಾಡ ಬೇಡ ಚಾಡಿ ಕೇಳಬೇಡವೊ
ಸೇಡನು ತೀರಿಸುವ ಹೇಡಿಯಾಗಬೇಡವೊ
ನಿನ್ನ ಮಾನದಂತೆ ಪರರ ಮಾನವೆಂದರಿಯೆಲೊ
ಅನ್ನ ಹಾಕುವವರ ಹರಿಸಿ ಘನ್ನವೆನಿಸೆಲೊ
ಕುಲವ ಶೋಧಿಸುತಲಿ ಕನ್ಯೆದಾನ ಮಾಡೆಲೊ
ತಲೆಯ ಕ್ರಾಪು ಯೋಗ್ಯತೆಗೆ ಪ್ರಮಾಣವಲ್ಲವೊ
ಒಲಿದು ಬಂದ ಕುಲದ ಕನ್ಯೆ ಕರವ ಪಿಡಿಯೆಲೊ
ಥಳಕು ಬೆಳಕು ನೋಡಿ ಬಲೆಗೆ ಬೀಳ ಬೇಡವೊ 100
ಗಾಳಿಯು ಬಂದಾಗ ಬೇಗ ತೂರಿ ಕೊಳ್ಳಲೊ
ಕಾಲದ ಸ್ಥಿತಿಯರಿತು ತಗ್ಗಿ ಬಗ್ಗಿ ನಡೆಯೆಲೊ
ಮೇಲಿನ ದರ್ಜೆಯಲಿ ನಡೆದು ಕೇಳಬೇಡವೊ
ನಾಲಗೆ ಚೆನ್ನಿರುವ ನರಗೆ ಜಗಳವಿಲ್ಲವೊ
ಇರುಳು ಕಂಡ ಬಾವಿಗೆ ನೀ ಉರುಳಬೇಡವೊ
ಶಕ್ತಿ ಇರುವ ಕಾಲದಲ್ಲಿ ಉತ್ತಮನೆನಿಸೊ
ಶಕ್ತಿಯಲ್ಲಿದಾಗ ಇದ್ದು ಸತ್ತ ಪ್ರಾಯವೊ
ಸ್ವೊತ್ತಮ ಜನರಲ್ಲಿ ನಿಯತ ಭಕ್ತಿ ಮಾಡೆಲೊ
ಭಕ್ತಿಯಿಲ್ಲದವಗೆ ಮುಕ್ತಿಯಿಲ್ಲ ಕಾಣಿರೊ 110

ಪಾಪಿಯಾಗಬೇಡ ಇತರ ಜನರ ವಂಚಿಸಿ
ಕೋಪ ಮಾಡಬೇಡ ಕೊಟ್ಟ ಋಣವ ಕೇಳಲು
ಕೂಪ ಕೂರ್ಮದಂತೆ ಜಗವ ನೋಡಬೇಡವೊ
ರೂಪುರಂಗುಗಳಿಗೆ ಮನವ ಸೋಲಬೇಡವೊ
ಹಡೆದ ಮಕ್ಕಳುಗಳ ಕಾಲದಲ್ಲಿ ತಿದ್ದೆಲೊ
ಗಿಡದಲಿ ಬಗ್ಗಿಸದ ಮರವು ಬಗ್ಗಲಾರದೊ
ಕೊಡಲಿಯನ್ನು ಸೇರಿ ಮರದ ಕಾವಿನಂದದಿ
ನಡತೆ ಕಲಿಸದಿದ್ದರವರು ಬುಡಕೆ ತರುವರೊ
ಗಳಿಸಿದವನ ಧನವು ಬಳಸಿದವನಿಗೆಂದರಿಯೆಲೊ
ಬಳಸಲು ನೀತಿಯಲಿ ಧನವ ಗಳಿಸಿ ಸುಖಿಸೆಲೊ 120

ಕಳಿಯಬೇಡಿ ಕಾಲವನ್ನು ಕುಳಿತೆಡೆಗಳಲಿ
ತಿಳಿದು ಮರ್ಮ ಕಲಿ ಪುರುಷನ ನೆಲಕೆ ತುಳಿಯಿರಿ
ಹೇಯ ಜನಕೆ ಗುಹ್ಯ ತತ್ವ ಪೇಳಬೇಡವೊ
ನಾಯಿಗಳಿಗೆ ಹವ್ಯದಾನ ಮಾಡಬೇಡವೊ
ಕಾಯುವ ಗುರುಚರಣವೆ ಬಲುಶ್ರೇಯವೆನ್ನದೆ
ಕಾಯ ಸುಟ್ಟರೇನು ಫಲವು ಕರ್ಮ ಸುಡುವುದೆ
ಉಣಲು ಬದುಕಬೇಡ ಜಗದಿ ಬದುಕಲು ಉಣೆಲೊ
ಜನನ ಮರಣ ನಿಯತ ಕಾಲಗಳಲಿ ಬರುವವೊ
ಕೊನೆ ಮೊದಲುಗಳಿಲ್ಲವು ಈ ಜಗಪ್ರವಾಹಕೆ
ತನಗೆ ತಾನೆ ಬೀಳದು ಜಗದಾಖ್ಯ ವೃಕ್ಷವು 130

ತಾಳಿದವನು ಬಾಳುವನೆಂದರಿತು ನಡೆಯೆಲೊ
ಗಾಳಿಗುದ್ದಿ ಕರಗಳನ್ನು ನೋಯಿಸದಿರೆಲೊ
ಬಾಲನೆಂದು ಅರಿತು ಸತತ e್ಞÁನವ ಗಳಿಸೆಲೊ
ನಾಳೆಯ ದಿನ ನಂಬದಂತೆ ಧರ್ಮಗಳಿಸೆಲೊ
ಹರಿಯುಕೊಟ್ಟ ಕಾಲದಲ್ಲಿ ಪರರ ರಕ್ಷಿಸೊ
ಹರಿಯು ಕೊಡದ ಕಾಲದಲ್ಲಿ ಹರುಷ ಬಿಡದಿರೊ
ದೂಷಕರನು ಎಂದಿಗು ನೀ ದ್ವೇಷಿಸದಿರೆಲೊ
ಹೇಸಿಗೆಯನು ನಾಲಿಗೆಯಲಿ ತೆಗೆದುಬಿಡುವರೊ
ಹಳ್ಳಕೆ ಬಿದ್ದವನಮೇಲೆ ಕಲ್ಲೆಸೆಯದಿರೊ
ಟೊಳ್ಳು ಹರಟೆಗಾರನೆದರು ನಿಲ್ಲ ಬೇಡವೊ 140

ಒಳ್ಳೆಯ ಫಲಕೊಡುವ ಕಾರ್ಯಗಳು ಚಿಂತಿಸೊ
ಜಳ್ಳು ಹುಲ್ಲಿಗಾಗಿ ಬೆವರು ಸುರಿಸಬೇಡವೊ
ಬಿಂದು ಬಿಂದು ಸೇರಿ ಸಿಂಧುವಾಯಿತೊ
ಹಿಂದಿನ ಮೊಳೆಯಿಂದ ದೊಡ್ಡ ವೃಕ್ಷವಾಯಿತೊ
ಒಂದನು ಇನ್ನೊಂದು ಸೇರಿ ಕೋಟಿಯಾಯಿತೊ
ಮಂದಿಗಳಿದನರಿತು ಪುಣ್ಯರಾಶಿ ಗಳಿಸಿರೊ
ನೆರಳು ನೀರು ಕೊಟ್ಟ ಜನರ ಮರೆಯ ಬೇಡವೊ
ಸರಿಯುತಿರುವ ಮಾರಿ ಮಸಣಿ ಕರೆಯಬೇಡವೊ
ಅರಿಯದ ಅe್ಞÁನಿಯೊಡನೆ ಸರಸಬೇಡವೊ
ತರುಗು ತಿನ್ನುವವನ ಕೇಳಬೇಡ ಹಪ್ಪಳ 150
ದೇಹಿಯೆಂದು ಬಂದವನಿಗೆ ನಾಸ್ತಿಯೆನದಿರೊ
ಸಾಹಸವನು ಮಾಡದಿರೊ ಪ್ರಬಲ ಜನರಲಿ
ಮೋಹಕೆ ತುತ್ತಾಗದಿರೆಲೊ ಪರಸತಿಯರಲಿ
ದೇಹಕೆ ಬಲ ಶುದ್ಧಿ ಕೊಡುವ ನಿಯಮ ಬಿಡದಿರೊ
ಭಾಗ್ಯಹೀನ ಬಡವನೆಂದು ಜರಿಯಬೇಡವೊ
ಯೋಗ್ಯತೆಯನು ತಿಳಿಯಲು ಬಲು ಸುಲಭವಲ್ಲವೊ
ಶ್ಲಾಘ್ಯವಾದ ಮೂಲಿಕೆಗಳನರಿಯೆ ಸುಲಭವೆ
ಯೋಗ್ಯತೆಯನುಸರಿಸಿ ಬರುವ ಭಾಗ್ಯ ಬೇರಿದೆ
ಖ್ಯಾತಿಗಾಗಿ ಆತ್ಮಸ್ತುತಿಯ ಮಾಡಬೇಡವೊ
ಕೋತಿಯಂತೆ ಕುಣಿಯಬೇಡ ಸರಿಸಮರೊಳಗೆ 160

ಮೂತಿ ತಿರುಗಬೇಡ ಪರರ ಹಿತನುಡಿಗಳಿಗೆ
ಸೋತ ಹಾಸ್ಯ ಮಾಡಬೇಡ ರಸಿಕ ಜನರಲಿ
ಹಿರಿಯರು ಸಂದೇಹಪಡುವ ಮಾರ್ಗ ತ್ಯಜಿಸೆಲೊ
ಬರಿಯ ಮಾತನಾಡಿ ಬೆನ್ನು ತಟ್ಟ ಬೇಡವೊ
ಪರರ ಹಳ್ಳಕ್ಕಿಳಿಸಿ ಆಳ ನೋಡಬೇಡವೊ
ಕರಕೆ ಸಿಕ್ಕಿದಾಗ ಹಲ್ಲು ಕಿರಿಯಬೇಡವೊ
ಮೆದೆಗೆ ಬೆಂಕಿಯಿಕ್ಕಿ ಅರಳು ಹುಡುಕಬೇಡವೊ
ಎದೆಯು ಒಡೆಯುವಂತೆ ಸುದ್ದಿ ಪೇಳಬೇಡವೊ
ಬೀದಿಯಲಿರುವ ಜನಗಳ ಬೇಸರಿಸಬೇಡವೊ
ಬೆದೆಯಲಿರುವ ದುರುಳನನ್ನು ಕೆಣಕಬೇಡವೊ 170

ಊರು ಕುರಿಯ ಕಾದು ಗೌಡನೆನಿಸಬೇಡವೊ
ಭಾರಿಯ ಜಲ ಪ್ರವಾಹ ತಡೆಯ ಹೋಗಬೇಡವೊ
ದೂರು ತರುವ ಜನರ ಕ್ಷಣದಿ ನಂಬಬೇಡವೊ
ನಾರಿಯ ಸಾಹಸವ ನಂಬಿ ದುಡುಕಬೇಡವೊ
ಎರಡು ಕರವು ಸೇರದೆ ಚಪ್ಪಾಳೆಯಾಗದು
ಕುರುಡನು ತೋರಿಸುವುದೆಲ್ಲ ಮಾರ್ಗವಾಗದು
ಕರಡಿಯು ಮೈಯಪರಚಲದು ಸೌಖ್ಯವಾಗದು
ಗುರುಗಳ ಬಿಟ್ಟೋದಲು ಉಪದೇಶವಾಗದು
ಹರಿಯಭಕುತಿ ಹರಿಯದಿರಲು ಗಾನವಾಗದು
ಬರಿಯ ಸ್ವರಗಳುರುಳಿಸೆ ಕೀರ್ತನೆಯದಾಗದು 180

ಕರದಿ ತಟ್ಟೆ ಹೊಳೆಯುಂತಿರೆ ಪುರಾಣವಾಗದು
ಕಿರಿಯ ಜನರ ಗುಣಗಾನವು ಭಜನೆಯಾಗದು
ಅಕ್ಕಿಗಾಗಿ ಅಲೆವರೆಲ್ಲ ದಾಸರಾಗರು
ಬೆಕ್ಕಿನಂತೆ ಕಣ್ಣು ಮುಚ್ಚಿ ಯತಿಗಳಾಗರು
ಚಿಕ್ಕ ಜಿರಳೆ ಮೀಸೆಯಿರಲು ರಾಯರಾಗದು
ಚಿಕ್ಕ ಕೊಳೆಯ ಚೌಕ ಧರಿಸೆ ಮಡಿಯದಾಗದು
ಕದ್ದು ಅವಿತುಕೊಂಬರೆಲ್ಲ ಗರತಿಯಾಗರು
ಮದ್ದು ಮಾಟ ಮಾಡುವವರು ಸುದತಿಯಾಗರು
ಶುದ್ಧ ಧೈರ್ಯ ನಡತೆಯಿಂದ ನಿಂದ್ಯರಾಗರು
ಬುದ್ಧಿ ಬದುಕು ಹೇಳುವವರು ದ್ವೇಷಿಯಾಗರು 190

ರೀತಿ ನೀತಿಗಳನು ಪರಗೆ ಹೇಳಲು ಸುಲಭ
ಮಾತನಾಡಿದಂತೆ ಮಾಡಿ ತೋರುವರಿಹರೇ
ತಾತನ ಕಾಲದಲ್ಲಿ ನುಡಿದ ಮಾತಿದಲ್ಲವು
ಹೋತನ ಗಳಸ್ತನವಿದಲ್ಲ ಕೂತು ಕೇಳರಿ
ಗಾದೆಗಳನು ವೇದವೆಂದು ಪೇಳಲುಚಿತವು
ಮಾದರಿ ಅಣುಶಕ್ತಿಯಿಂದೆ ಗಾದೆ ಗಾದೆಗು
ಪರಮ ಭಾಗವತರ ಚರಿತೆಯೋದಿ ನೋಡಿರಿ
ಅರಿಯಬಹುದು ನುಡಿದ ನೀತಿಸಾರವೆಲ್ಲವ
ನಾಡುನುಡಿಗಳೆಂದು ಮರೆಯಬೇಡವೆಂದಿಗು
ಪಾಡಿದರೆ ಪ್ರಸನ್ನ ಹರಿಯು ನೀಡುವ ಫಲವ 200
*******