" ಶ್ರೀ ಕಾರ್ಪರ ನರಹರಿದಾಸರು "
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||
ಸ್ಮರಿಸುವರಿಗೆ ಸುರತರುಕಲ್ಪ । ವಿ ।
ಭರಾಮಪುರದಿ ಶ್ರೀಹರಿ । ಧ್ಯಾನ ।
ಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||
ಭರತ ಭೂಮಿಯೊಳವತರಿಸಿ ದೇವಾಂಶದಿ ।
ಪುರುಹೂತನಂತೆ ಗಜಾಂತ ವೈಭವದಿಂದ ।
ಮೆರೆಯುತ ತಮ್ಮಯ ಚರಣಾರಾಧಕರನು- ।
ದ್ದರಿಸಲೋಸುಗದಿ ಸಂಚರಿಸುತ ಮುದದಿ ।।
ಸಂದರುಶನದಿಂಧಾಘವ ಕಳೆದು ಬಲು ।
ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-।
ನರ ಪೊರೆವ ಭೂಸುರರೊಳು ।
ಮರುತ ಮತಾಬ್ಧಿ ಚಂದಿರನೆನಿಸಿದವರ ।। ಚರಣ ।।
ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ ।
ಶಿರಪರಿಯಂತರ ಗುರುಗಳಾಕೃತಿಯನ್ನು ।
ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ ।
ಪರಿಶೋಭಿಸುವ ರತ್ನಾಭರಣದಿಂದೋಪ್ಪುವ ।।
ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ ।
ಸುಂದರವಾದ ಮುಖದೊಳು ಮಂದಸ್ಮಿರ ।
ಕಸ್ತೂರಿಯಂತೆ ಪರಿಮಳಾನ್ವಿತ ಶರೀರ ।
ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ ।। ಚರಣ ।।
ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ ।
ವರಪುತ್ರ ಸೌಖ್ಯವ ಕರುಣಿಸುವರು ಸತ್ಯ ।
ಅಪರಿಮಿತ ಮಹಿಮರೆಂದರಿಯದೆ ಇವರನ್ನು ।
ಜರಿಯಲಾಕ್ಷಣದಲಿ ಅರಿತು ಭೀಕರವಾದ ।।
ಉರಗರೂಪವ ತೋರುತ ತ್ಯಜಿಸಿ ಮತ್ತೆ । ನಿ ।
ಜರೂಪದಿಂದಿರುತ ನೋಳ್ಪರಿಗತ್ಯಾ।
ಶ್ಚರ್ಯ ಸದ್ಗುಣಭರಿತ ಕಾರ್ಪರ ।
ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |
*********
ಕಾರ್ಪರ ನರಹರಿದಾಸರು ಶ್ರೀ ಅಪ್ಪಾವರ ಮೇಲೆ ರಚಿಸಿದ ಕೃತಿ
ಸ್ಮರಿಸುವ ನರನೇ ಧನ್ಯ ಸನ್ಮಾನ್ಯ || ಪ ||
ಸ್ಮರಿಸುವರಿಗೆ ಸುರತರುಕಲ್ಪ ವಿಭರಾಮ
ಪುರದಿ ಶ್ರೀಹರಿ ಧ್ಯಾನಪರ ಶ್ರೀ ಕೃಷ್ಣಾಚಾರ್ಯರ ||ಅ.ಪ ||
ಭರತ ಭೂಮಿಯೊಳವತರಿಸಿ ದೇವಾಂಶದಿ
ಪುರುಹೂತನಂತೆ ಗಜಾಂತ ವೈಭವದಿಂದ
ಮೆರೆಯುತ ತಮ್ಮಯ ಚರಣಾರಾಧಕರನು-
ದ್ದರಿಸಲೋಸುಗದಿ ಸಂಚರಿಸುತ ಮುದದಿ
ಸಂದರುಶನದಿಂಧಾಘವ ಕಳೆದು ಬಲು
ಕರುಣದಲಿಷ್ಟಾರ್ಥವ ಗರಿದು ಬಹು ಶರಣು ಜ-
ನರ ಪೊರೆವ ಭೂಸುರರೊಳು ಮರುತ ಮತಾಬ್ಧಿ
ಚಂದಿರನೆನಿಸಿದವರ |
ವರ್ಣಿಸಲೊಶವಲ್ಲ ಚರಣಯುಗ್ಮಾರಭ್ಯ
ಶಿರಪರಿಯಂತರ ಗುರುಗಳಾಕೃತಿಯನ್ನು
ನಿರುತ ಧ್ಯಾನಿಪರಿಗೆ ಪರಮ ಮಂಗಳವೀವ
ಪರಿಶೋಭಿಸುವ ರತ್ನಾಭರಣದಿಂದೋಪ್ಪುವ
ಸ್ವರ್ಣತುಲಸಿ ಮುಕ್ತಹಾರ ಭೂಷಿತ ಕಂಧರ
ಸುಂದರವಾದ ಮುಖದೊಳು ಮಂದಸ್ಮಿರ
ಕಸ್ತೂರಿಯಂತೆ ಪರಿಮಳಾನ್ವಿತ ಶರೀರ
ಮಂತ್ರಾಲಯ ಗುರುರಾಘವೇಂದ್ರರ ಕರುಣಾಸುಪಾತ್ರರ |
ಚಿರಕಾಲ ಶೇವಿಪ ಪರಮ ವಂಧ್ಯರಿಗೆಲ್ಲ
ವರಪುತ್ರ ಸೌಖ್ಯವ ಕರುಣಿಸುವರು ಸತ್ಯ
ಅಪರಿಮಿತ ಮಹಿಮರೆಂದರಿಯದೆ ಇವರನ್ನು
ಜರಿಯಲಾಕ್ಷಣದಲಿ ಅರಿತು ಭೀಕರವಾದ
ಉರಗರೂಪವ ತೋರುತ ತ್ಯಜಿಸಿ ಮತ್ತೆ
ನಿಜರೂಪದಿಂದಿರುತ ನೋಳ್ಪರಿಗತ್ಯಾಶ್ಚರ್ಯ ಸದ್ಗುಣಭರಿತ ಕಾರ್ಪರ ನರಹರಿಯ ಪರೋಕ್ಷದಿ ನಿರುತ ಸುಖಿಪರಂಘ್ರಿ |
*****