Showing posts with label ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ mahipati. Show all posts
Showing posts with label ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ mahipati. Show all posts

Wednesday, 1 September 2021

ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಸ್ವಸುಖ ನೋಡಿ ಸದ್ಗುರು ಕೃಪೆಯಿಂದ ವಿಶ್ವತೋಮುಖ ತೋರುವ ತಾಂ ಗೋವಿಂದ ಪ  


ಏನೆಂದ್ಹೇಳಲಯ್ಯ ಅನುಭವದ ಮಾತು ಖೂನಾಗ್ಯಾದೊಂದೇ ಶಾಶ್ವತ ಆನಂದೋಭರಿತ ಸ್ವಾನಂದ ಸುಖ ತಾನೆ ಆಗ್ಯದೆ ಸನ್ಮತ ಘನಬೆರೆದು ನೋಡುವದೀ ಸುಪಥ 1 

ಮಲಕಿನ ಮನುಜರು ಮನವಿಡಬಲ್ಲರೇ ನಾಲ್ಕು ವೇದ ಸಾರುದಕ ಒಮ್ಮೆಯಾದರ ನಿಲುಕಿಸಿ ನಿಜ ನೋಡಿದರಸಾಧ್ಯ ಬೆಳಕೆ ಆಗ್ಯದ ನೋಡಿ ತಿಳಿಕೊಂಡರೆ 2 

ಗುರುವಿನಿಂದಧಿಕಿಲ್ಲ ಅರಿತುಕೊಳ್ಳಿರೊ ಖೂನ ಪರಮಗತಿಯ ಸಾಧನ ಸುತತ್ವ ಜ್ಞಾನ ಬೆರೆದು ಮಹಿಪತಿ ಪೂರ್ಣ ಸದ್ಗುರು ಚರಣಕೆರಗಿ ಮನ ಪಡೆವದೀ ದಯಕರುಣಾ 3

***