ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾನಂದದ ಘನಸುಖ ಏನೆಂದ್ಹೇಳಲಿ ಕೌತುಕ ಪ
ಬಲಗೊಂಡದೆ ಬ್ರಹ್ಮಭಾವ ನೆಲಗೊಂಡದೆ ಸರ್ವದ ಬಲುದೋರುತದೆ ಸುಸ್ವಾದ ಸುಲಭ ಸದ್ಗುರು ಪ್ರಸಾದ 1
ತಾನಾಗ್ಯದೆ ತಾರ್ಕಣ್ಯಸ್ವಾನುಭವದ ಸುಪುಣ್ಯ ಮುನಿಜನರೆ ಧನ್ಯಧನ್ಯ ಅಣುರೇಣುಕ ತಾ ಮಾನ್ಯ 2
ಮನೋನ್ಮನದಾಶ್ರಯ ಭಾನುಕೋಟಿ ಉದಯ ದೀನ ಮಹಿಪತಿಗಿದೆ ಸಾಹ್ಯ ಅನುದಿನಿದೇ ಉಚ್ಛ್ರಾಯ 3
***