Showing posts with label ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆ mahipati. Show all posts
Showing posts with label ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆ mahipati. Show all posts

Wednesday, 1 September 2021

ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆ ankita mahipati

 ಕಾಖಂಡಕಿ ಶ್ರೀ ಮಹಿಪತಿರಾಯರು

ಸ್ವಾನುಭವದ ಸುಖ ಸಾಧಿಸಿ ನೋಡಿರೋ ನೇಮದಿಂದ ಘನ ಗುರು ಕೃಪೆಯಿಂದ ಅನುಭವಿಸಲು ಬ್ರಹ್ಮಾನಂದ ಪ  


ಶಿಖಾಮಧ್ಯದಲಿ ಪೂರ್ಣ ಸುಖಗರವುತಲ್ಯದೆ ಸಂತ್ರಾಧಾರಿ ಸಕಲವೆಲ್ಲಕೆ ಸನ್ಮತವಾಗಿ ತೋರುವದೊಂದೇ ಪರಿ ಶುಕಾದಿ ಮುನಿಗಳು ಪ್ರಕಟಿಸಿ ಹೇಳಿಹರು ಖೂನದೋರಿ ಬೇಕಾದರೆ ಇದು ನೋಡಬೇಕು ಷಡುಚಕ್ರವೇರಿ 1 

ಸಾಮಾನ್ಯವಲ್ಲವಿದು ಸಹಸ್ರ ಕೋಟಿಗೊಬ್ಬ ಬಲ್ಲ ಖೂನ ಕಾಮಾಂಧದೊಳಗಿದ್ದ ಮನುಜ ಪ್ರಾಣಿಗಳು ಬಲ್ಲವೇನ ತಾಮಸಿಗಳಿಗಿದು ತಾರ್ಕಣ್ಯವಾಗುವದಲ್ಲ ಗಮ್ಯಸ್ಥಾನ ಸ್ವಾಮಿ ಸದ್ಗುರು ದಯಮಾಡಿದರಹುದು ಸಮ್ಯಗಜ್ಞಾನ 2 

ಶಿರೋರತ್ನವಾಗಿ ವಂದಿಸಿಕೊಂಬುವದಿದೆಲ್ಲಕೆ ಪೂಜ್ಯ ಹರುಷಗೈಸುವ ಪುಣ್ಯ ಪರಮ ಭಕ್ತರಿಗಿದೆವೆ ಸಾಯೋಜ್ಯ ತರಳ ಮಹಿಪತಿಗಿದೆ ಸ್ವ ಸುಖದೋರುವ ಸುಸಾಮ್ರಾಜ್ಯ ಶಿರದಲಿ ಕರವಿಟ್ಟು ತೋರಿದ ಗುರು ಭಾನುಕೋಟಿತೇಜ 3

***