Showing posts with label ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು prasannavenkata. Show all posts
Showing posts with label ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು prasannavenkata. Show all posts

Monday, 18 November 2019

ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ankita prasannavenkata

by ಪ್ರಸನ್ನವೆಂಕಟದಾಸರು
ಹನುಮ ನಮ್ಮ ತಾಯಿ ತಂದೆಭೀಮ ನಮ್ಮ ಬಂಧು ಬಳಗಆನಂದತೀರ್ಥರೆ ನಮ್ಮ ಗತಿಗೋತ್ರರು ಪ.

ತಾಯಿ ತಂದೆ ಹಸುಳೆಗಳಿಗೆ ರಸಾಯನುಣಿಸಿ ಸಾಕುವಂತೆಆಯಾಸವಿಲ್ಲದೆ ಸಂಜೀವನವ ತಂದುಗಾಯಗೊಂಡ ಕಪಿಗಣವಪ್ರಿಯದಿಂದ ಪೊರೆದ ರಘುರಾಯನಂಘ್ರಿಗಳೆ ಸಾಕ್ಷಿ ತ್ರೇತಾಯುಗದಿ 1

ಬಂಧು ಬಳಗದಂತೆ ಆಪದ್ಬಾಂಧವನಾಗಿ ಪಾರ್ಥರಿಗೆಬಂದ ಬಂದ ದುರಿತಗಳ ಪರಿಹರಿಸಿಅಂಧಕಜಾತರ ಕೊಂದುಅಂದೆ ಕೃಷ್ಣಾರ್ಪಣವೆಂದಾ ಯದುಕುಲೇಂದ್ರನಂಘ್ರಿಗಳೆ ಸಾಕ್ಷಿ ದ್ವಾಪರಾಂತ್ಯದಿ 2

ಗತಿಗೋತ್ರರಂತೆ ಸಾಧುತತಿಗಳಿಗೆ ಸುಜ್ಞಾನವಿತ್ತುಮತಿಗೆಟ್ಟ ಇಪ್ಪತ್ತೊಂದು ಕುಭಾಷ್ಯಂಗಳಗತಿಗೆಡಿಸಿ ವೈಷ್ಣವರಿಗೆ ಸದ್ಗತಿಯ ತೋರಿದ ಪ್ರಸನ್ವೆಂಕಟಪತಿವ್ಯಾಸಾಂಘ್ರಿಗಳೆ ಸಾಕ್ಷಿ ಕಲಿಯುಗದಿ3
******