Showing posts with label ಹರಿಯ ಚರಣವೆಂಬ ಸುರಧೇನವನು purandara vittala. Show all posts
Showing posts with label ಹರಿಯ ಚರಣವೆಂಬ ಸುರಧೇನವನು purandara vittala. Show all posts

Saturday, 7 December 2019

ಹರಿಯ ಚರಣವೆಂಬ ಸುರಧೇನವನು purandara vittala

ಪುರಂದರದಾಸರು
ಹರಿಯ ಚರಣವೆಂಬ ಸುರಧೇನವನುಗುರುಬೋಧೆಯೆಂಬ ಕಣ್ಣಿಯಲಿ ಕಟ್ಟಿರಯ್ಯಪ.

ಭಕುತಿಯೆಂಬ ಕರುವನೆ ಬಿಟ್ಟು ನಿರುತ ವಿರಕುತಿಯೆಂಬ ಚೆನ್ನದಳಿಯ ಹಾಕಿ ||ಯುಕುತವಾದ ನಿತ್ಯಕಾಯ ಚರಿಗೆಯೊಳುಮುಕುತಿನಾಮಾಮೃತ ಕರೆದುಕೊಳ್ಳಿರಯ್ಯ 1

ಕಾಮ ಕ್ರೋಧ ಲೋಭ, ಮೋಹ ಮದ ಮತ್ಸರಗಳೆಂಬಹಮ್ಮೆಂಬ ಕುರುಳನೆ ತಾಳಿ ಹಾಕಿ ||ತಾಮಸ ಜ್ಞಾನಾಗ್ನಿ ಪುಟಗೈದು ಇಂದ್ರಿಯನೇಮದ ನೀರ ಬೆರಸಿ ಕಾಯಲಿಡರೊ 2

ಶಾಂತಗುಣವೆಂಬ ಹದನರಿತು ಆರಿಸಿ ಮತ್ತೆಭ್ರಾಂತಮನ ಮಜ್ಜಿಗೆಯ ಹೆಪ್ಪನಿಕ್ಕಿ ||ಕಾಂತವಿಷ್ಣು ಮಾಯಾಮಂಥದಿ ಶೋಧಿಸಿ ಸಿ -ದ್ಧಾಂತವೆಂಬ ಕಡೆಗೋಲ ನೇಣನೆ ಪಿಡಿದು 3

ಪರಬೊಮ್ಮನೆನಿಪ ಬೆಣ್ಣೆಯ ಮುದ್ದಿಯನೆ ತೆಗೆದುಶರಣಮಣಿಯೆಂಬ ತುಪ್ಪವನೆ ಕಾಯಿಸಿ ||ಮರಣವೆಂಬ ನೊರೆ ತೆಗೆದೊಗೆದು ಅಮೃತವನಿರುತ ಹೃದಯವೆಂಬ ಕೊಡವನೆ ತುಂಬಿರೊ 4

ಅನವರತ ಹರಿಸ್ಮರಣೆಯೆಂಬ ಬೀಸೂರಿಗೆಅನುವಾಗಿ ಕುಳಿತುಂಡು ಸುಖದಿ ತೇಗಿ ||ಚಿನುಮಯ ಚಿದಾನಂದ ಪುರಂದರವಿಠಲನಅನುದಿನ ನೆನೆ ನೆನೆದು ಸುಖಿಯಾಗಿರಯ್ಯ 5
*********