ಹರಿಯ ನೆನೆಯದ ನರಜನ್ಮವೇಕೆ, ನರ-
ಹರಿಯ ಕೊಂಡಾಡದ ನಾಲಿಗೆಯೇಕೆ
ವೇದವನೋದದ ವಿಪ್ರ ತಾನೇಕೆ
ಕಾದಲರಿಯದ ಕ್ಷತ್ರಿಯನೇಕೆ
ಕ್ರೋಧವ ಬಿಡದ ಸನ್ಯಾಸಿ ತಾನೇಕೆ
ಆದರವಿಲ್ಲದ ಅಮೃತಾನ್ನವೇಕೆ
ಸತ್ಯ ಶೌಚವಿಲ್ಲದಾಚಾರವೇಕೆ
ನಿತ್ಯ ನೇಮವಿಲ್ಲದ ಜಪ ತಪವೇಕೆ
ಭಕ್ತಿಲಿ ಮಾಡದ ಹರಿ ಪೂಜೆಯೇಕೆ
ಉತ್ತಮರಿಲ್ಲದ ಸಭೆಯು ತಾನೇಕೆ
ಮಾತಾಪಿತರ ಪೊರೆಯದ ಮಕ್ಕಳೇಕೆ
ಮಾತು ಕೇಳದ ಸೊಸೆ ಗೊಡವೆ ತಾನೇಕೆ
ನೀತಿನೇರಿಲ್ಲದ ಕೂಡ ತಾನೇಕೆ ಅ-
ನಾಥನಾದ ಮೇಲೆ ಕೋಪವದೇಕೆ
ಅಳಿದು ಅಳಿದು ಹೋಗುವ ಮಕ್ಕಳೇಕೆ
ತಿಳಿದು ಬುದ್ಧಿಯ ಹೇಳದ ಗುರುವೇಕೇ
ನಳಿನನಾಭ ಶ್ರೀ ಪುರಂದರವಿಠಲನ
ಚೆಲುವ ಮೂರುತಿಯ ನೋಡದ ಕಂಗಳೇಕೆ
***
ರಾಗ ಪೂರ್ವಿ. ಅಟ ತಾಳ (raga tala may differ in audio)
pallavi
hariya neneyada narajanmavEke narahariya koNDADada nAligeyEke
caraNam 1
vEdavanOdada vipra tAnEke kAdalariyada kSatriyanEkE
krOdhava biDada sanyAsi tAnEke Adharavillada amrtAnnavEke
caraNam 2
satya saucavilladAcAravEke nitya nEmavillada japa tapavEke
bhaktiyali mADada hari pUjeyEke uttamarillada sabheyu tAnEke
caraNam 3
mAtA pitara poraeyada makkaLEke mAtu kELada sosekoDave tAnEke
nItinErillada kUDa tnEke anAthanAtha mEle kOpavadEke
caraNam 4
aLidu aLidu hOguva makkaLEke tiLidu buddhiya hELada guruvEkE
naLina nAbha shrI purandara viTTalana celuva mUrutiya nODada gangaLEke
***
ಹರಿಯ ನೆನೆಯದ ನರಜನ್ಮವೇಕೆ ?
ಶ್ರೀಹರಿಯ ಕೊಂಡಾಡದ ನಾಲಿಗೆಯಿನ್ನೇಕೆ ಪ.
ಸತ್ಯ - ಶೌಚವಿಲ್ಲದ ಆಚಾರವೇಕೆ ?ಚಿತ್ತ ಶುದ್ಧಿಯಿಲ್ಲದ ಜ್ಞಾನವೇಕೆ ?ಭಕ್ತಿ - ಭಾನವಿಲ್ಲದ ದೇವಪೂಜೆ ಏಕೆ ?ಉತ್ತಮರಿಲ್ಲದ ಸಭೆಯು ಇನ್ನೇಕೆ ? 1
ಕ್ರೋಧವ ಬಿಡದಿಹ ಸಂನ್ಯಾಸವೇಕೆ ?ಆದರವಿಲ್ಲದ ಅಮೃತಾನ್ನವೇಕೆ ?||ವೇದ - ಶಾಸ್ತ್ರವಿಲ್ಲದ ವಿಪ್ರತನವೇಕೆಕಾದಲಂಜುವನಿಗೆ ಕ್ಷಾತ್ರ ತಾನೇಕೆ ? 2
ಸಾಲದಟ್ಟುಳಿಯೆಂಬ ಸಂಸಾರವೇಕೆ ?ಬಾಲಕರಿಲ್ಲದ ಭಾಗ್ಯವಿನ್ನೇಕೆ ?ವೇಳೆಗೆ ಒದಗದ ನೆಂಟರಿನ್ನೇಕೆ ? ಅನುಕೂಲವಿಲ್ಲದ - ಸತಿಯ ಸಂಗವೇಕೆ 3
ಮಾತೆ - ಪಿತರ ತೊರೆದ ಮಕ್ಕಳಿನ್ನೇಕೆ ?ಮಾತು ಕೇಳದ ಮಗನಗೊಡವೆ ಇನ್ನೇಕೆ ||ನೀತಿ ತಪ್ಪಿದ ದೊರೆಯ ಸೇವೆ ಇನ್ನೇಕೆ ? ಅನಾಥನಾಗಿರುವಗೆ ಕೋಪವಿನ್ನೇಕೆ ? 4
ಅಳಿದುಳಿದಿಹ ಮಕ್ಕಳುಗಳಿನ್ನೇಕೆ ?ತಿಳಿದು ಬುಧ್ಧಿಯ ಹೇಳಿದ ಗುರುತನವೇಕೆ ?ನಳಿನನಾಭ ಶ್ರೀ ಪುರಂದರವಿಠಲನಚೆಲುವ ಮೂರುತಿಯ ಕಾಣದ ಕಂಗಳೇಕೆ 5
*******