Showing posts with label ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ mahipati. Show all posts
Showing posts with label ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ mahipati. Show all posts

Wednesday, 1 September 2021

ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ ankita mahipati

ಹರಿಯನರಿಯದಿಹ್ಯ ನರಜನ್ಮಾವ್ಯಾಕೆ ಪರಬ್ರಹ್ಮವರಿಯದ ಬರೆ ಬ್ರಾಹ್ಮಣವ್ಯಾಕೆ ಪ  


ಹರಿಃ ಓಂ ತತ್ಸದಿತಿಯೆಂಬ ಶ್ರೀ ಹರಿ ವಾಕ್ಯವರಿಯದೆ ಬರುದೆ ಶ್ರೀ ಹರಿ ಶ್ರೀ ಹರಿಯಂದೊದರುವದ್ಯಾಕೆ 1 

ಏಕಾಂಶೇನ ಸ್ಥಿತೋ ಜಗತ ಎಂಬ ವಾಕ್ಯವರಿಯದೆ ನಾಲ್ಕಾರು ವೇದಶಾಸ್ತ್ರವೋದಿ ಕೇಳುವದ್ಯಾಕೆ 2 

ಎಂಬ ವಾಕ್ಯವರಿಯದೆ ಹದಿನೆಂಟು ಪುರಾಣ ಕೇಳಿ ಹೇಳುವದ್ಯಾಕೆ 3 

ಮಮೈವಾಂಶೋ ಜೀವಲೋಕೇ ಜೀವಭೂತ:ಸನಾತನ ಎಂಬ ವಾಕ್ಯವರಿಯದೆ ನಾನಾವ್ರತಾಚಾರ ಸಂನ್ಯಾಸ ಕೈಕೊಂಬುದ್ಯಾಕೆ 4 

ಸುದರ್ಶನ ಮಹಾಜ್ವಾಲಾ ಕೋಟಿಸೂರ್ಯ ಸಮಪ್ರಭ ಎಂಬ ವಾಕ್ಯವರಿಯದೆ ಸೀಳಿ ಸುದರ್ಶನಗಳ ಪೂಜಿ ಮಾಡುವದ್ಯಾಕೆ 5 

ಮಂತ್ರ ಪ್ರಣಮ್ಯವರಿಯದೆ ತಂತ್ರ ಮಂತ್ರಸರವ್ಯಾಕೆ ಅಂತರಾತ್ಮವರಿಯದೆ ತರ್ಕಭೇದಗಳ್ಯಾಕೆ 6 

ವಿಶ್ವವ್ಯಾಪಕ ಗುರು ಭಾಸ್ಕರಮೂರ್ತಿ ಶ್ರೀಪಾದ ವಿಡದಿಹ ಮಹಿಪತಿಗೆ ಭವಪಾಶದಂಜಿಕಿನ್ಯಾಕೆ 7

***