ಹರಿಯೇ ಶ್ರೀಗುರು ನಮ್ಮ ಹರಿಯೇ ಸದ್ಗುರು ನಮ್ಮ ಹರಿಯೇ ಮದ್ಗುರು ಪರಾತ್ಪರ ಪೂರ್ಣನು ಪ
ಹರಿಯೇ ಗುರುವೆಂದೆನಿಸಿ ಗುರವೆ ಹರಿ ಎಂದೆನಿಸಿ ಕರಸಿಕೊಂಡವನೊಬ್ಬನೆ ಪರಬ್ರಹ್ಮನು ನರಮನುಜಾಗಾಗುವದು ದುರ್ಗತಿಯ 1
ಒಂದು ವಸ್ತುವೆ ತಾನನೇಕ ನಾಮವ ಧರಿಸಿ ಸಂದಿಸಿ ಹ್ಯಾ ನಂದ ರೂಪದೊಳಗೆ ಮಂದಮತಿಗಳ ವಿವರ ಮರ್ಮವನು ಅರಿಯದೆ ದ್ವಂದ್ವ ಭೇದದಿ ಗಾಢಸುತ್ತಿಹರು 2
ಹರಿಯೇ ಶ್ರೀಗುರುವಾಗಿ ಗುರುವೆ ಶ್ರೀಹರಿಯಾಗಿ ತೋರಿದನೇಕೋಮಯವಾಗಿ ಎನಗೆ ತರಳ ಮಹಿಪತಿ ಸಬಾಹ್ಯಾಂತ್ರ ಪರಿಪೂರ್ಣದಲಿ ಗುರುತವಾದನು ಹರಿಯೇ ಸಾಕ್ಷತನು 3
***