Showing posts with label ಹರಿಹರರು ಸರಿಯೆಂಬ ಮರುಳು ಜನರು rangavittala. Show all posts
Showing posts with label ಹರಿಹರರು ಸರಿಯೆಂಬ ಮರುಳು ಜನರು rangavittala. Show all posts

Wednesday 11 December 2019

ಹರಿಹರರು ಸರಿಯೆಂಬ ಮರುಳು ಜನರು ankita rangavittala

ಹರಿಹರರು ಸರಿಯೆಂಬ ಮರುಳು ಜನರುಹರಿಹರರ ಚರಿತೆಯನು ತಿಳಿದು ಭಜಿಸುವುದು ಪ

ಸುರರು ಮುನಿಗಳು ಕೂಡಿ ಪರದೈವವಾರೆಂದುಅರಿಯಬೇಕೆಂದೆರಡು ವರಧನುಗಳಹರಿಹರರಿಗಿತ್ತು ಸಂಗರವ ಮಾಡಿಸಿ ನೋಡೆಮುರಹರನು ಪುರಹರನ ಗೆಲಿದುದರಿಯಾ 1

ಹರನ ಕುರಿತಸುರ ಮಹತಪವ ಮಾಡಲು ಮೆಚ್ಚಿವರವನವಗಿತ್ತು ಹರ ಬಳಲಿ ಓಡಿಬರಲುಹರಿ ಬಂದವನ ಕರವ ಶಿರದ ಮ್ಯಾಲಿರಿಸಿ ಖಳ-ನುರುಹಿ ಹರನನು ಕಾಯಿದ ಕಥೆಯ ನೀನರಿಯಾ 2

ದೂರ್ವಾಸರೂಪ ಹರನಂಬರೀಷನ ಮುಂದೆಗರ್ವವನು ಮೆರೆಸಿ ಜಡೆಯನು ಕಿತ್ತಿಡೆಸರ್ವಲೋಕದೊಳವನ ಚಕ್ರನಿಲಲೀಯದಿರೆಉರ್ವೀಶನನು ಸಾರಿ ಉಳಿದನರಿಯಾ 3

ಹರನಂಶ ದ್ರೋಣಸುತನು ಪಾಂಡವಾ ಎಂದುಉರವಣಿಸಿ ನಾರಾಯಣಾಸ್ತ್ತ್ರವನು ಬಿಡಲು ಹರಿ ಬಂದು ಬೇಗ ತನ್ನಸ್ತ್ರವನು ತಾ ಸೆಳೆದುಶರಣಾಗತರ ಕಾಯಿದ ಕಥೆಯನರಿಯಾ 4

ನರನಾರಾಯಣರು ಬದರಿಕಾಶ್ರಮದಲಿರೆಹರನು ಹರಿಯೊಡನೆ ಕದನವನು ಮಾಡೆಹರಿ ಹರನ ಕಂಠವನು ಕರದಲಿ ಪಿಡಿದು ನೂಕೆಕೊರಳ ಕಪ್ಪಾದ ಕಥೆ ಕೇಳಿ ಅರಿಯಾ 5

ಹರಿ ಸುರರಿಗಮೃತವನು ಎರೆದ ರೂಪವನೊಮ್ಮೆಹರ ನೋಡುವೆನೆಂದು ಸಂಪ್ರಾರ್ಥಿಸೆಪರಮ ಮೋಹನ ರೂಪಲಾವಣ್ಯವನು ಕಂಡುಹರ ಮರಳುಗೊಂಡ ಕಥೆ ಕೇಳಿ ಅರಿಯಾ 6

ಹರಿಯ ಮೊಮ್ಮನ ಬಾಣಾಸುರನು ಸೆರೆವಿಡಿಯೆಗರುಡವಾಹನನಾಗಿ ಕೃಷ್ಣ ಬಂದುಹರನ ಧುರದಲಿ ಜಯಿಸಿ ಅವನ ಕಿಂಕರನ ಸಾ-ವಿರ ತೋಳುಗಳ ತರಿದ ಕಥೆಯ ನೀನರಿಯಾ 7

ಸುರತರುವ ಕಿತ್ತು ಹರಿ ಸುರಲೋಕದಿಂದ ಬರೆಹರನು ಹರಿಯೊಡನೆ ಕದನವನು ಮಾಡೆತರಹರಿಸಲಾರದೋಡಿದ ಕಥೆಯ ನೀನೊಮ್ಮೆಹಿರಿಯರ ಮುಖದಿ ಕೇಳಿ ನಂಬು ಹರಿಯಾ 8

ಹರಸುತನು ತಪದಿಂದ ಹರಿಯ ಚಕ್ರವ ಬೇಡೆಪರಮ ಹರುಷದಲಿ ಚಕ್ರವನೀಯಲುಭರದಿಂದ ಧರಿಸಲಾರದೆ ಚಕ್ರವನಂದುಹರನು ಭಂಗಿತನಾದನೆಂದರಿಯಲಾ 9

ರಾವಣಾಸುರ ಕುಂಭಕರ್ಣ ನರಕಾದಿಗಳುಶೈವತಪವನು ಮಾಡಿ ವರವ ಪಡೆಯೆಅವರುಗಳನು ವಿಷ್ಣು ನರರೂಪಿನಿಂದರಿದುದೇವರ್ಕಳನು ಕಾಯಿದ ಕಥೆಯ ನೀನರಿಯಾ 10

ಗಂಗಾಜನಕನÀ ಸನ್ಮಂಗಲ ಚರಿತ್ರ್ರೆಗಳಹಿಂಗದಲೆ ಕೇಳಿ ಸುಖಿಸುವ ಜನರಿಗೆಭಂಗವಿಲ್ಲದ ಪದವನಿತ್ತು ಸಲಹುವ ನಮ್ಮರಂಗವಿಠ್ಠಲರಾಯನ ನೆರೆ ನಂಬಿರೋ11
**********