ಕಾಖಂಡಕಿ ಶ್ರೀ ಕೃಷ್ಣದಾಸರು
ಹರಿಹರಿ ಕೊಡು ನಿನ್ನಯಚ್ಚರನು ಶರಣವಾ ಧೃಡದಲಿ ಬಂದೆನಾನು ಪ
ಅವಿದ್ಯೆಮಬ್ಬಿನಲಿ ಹರಿಬಂದ ಹಾವಿನ ಪರಿಯಾಗಿ ವಿವೇಕ ಯವಿಮುಚ್ಚಿಕಂಗಾಣದೆ ಸೇವೆಗೆ ಹೊರತಾದೆ 1
ನ್ಯೂನವ ನಾಲಿಸಲು ತಪ್ಪಿಗೆ ತಾನೆಣಿಕೆಗಳಿಲ್ಲಾ ಏನರಿಯದ ಮೂಢಾ ಇವನೆಂದು ನಿನುದ್ಧರಿಸೆನ್ನಾ 2
ಎಂದೆಂದು ಪ್ರೇಮದಲಿಂದಾ ಗೆಳೆತನಾ ಛೆಂದವೆನಗ ನಿನಗ | ಎಂದೇ ಮನೆಯೊಳಿದ್ದು ಮಾತಾಡದೇ ನಿಂದುದುಚಿತವಲ್ಲ 3
ಕಡೆಗಣ್ಣಿಲಿ ನೋಡೋ ಉದಾಸೀನ ನುಡಿಯ ಮಾಡಲಿಬೇಡ | ಒಡೆಯಾ ನಿನ್ನಂಘ್ರಿಮದಾ ದಾಸರಾ ಅಡಿಗಳಾಶ್ರಯದಲಿಡೋ 4
ಕಾಲಬಿದ್ದರವು ರಾಕುಡುವರು ಕೆಳೆಲೋ ಗಾದಿಯನು ಪಾಲಿಸೋಮಹಿಪತಿ ಸುತ ಪ್ರಭು ಒಲುಮೆಯಾ ಸುಖನೀಡೋ 5
***