Showing posts with label ಹಸೆಗೆ ಬಾರೊ ಹರುಷಬೀರೊ ಬಿಸಜನಾಭನೇ gururama vittala. Show all posts
Showing posts with label ಹಸೆಗೆ ಬಾರೊ ಹರುಷಬೀರೊ ಬಿಸಜನಾಭನೇ gururama vittala. Show all posts

Wednesday, 16 June 2021

ಹಸೆಗೆ ಬಾರೊ ಹರುಷಬೀರೊ ಬಿಸಜನಾಭನೇ ankita gururama vittala

 ಶ್ರೀ ಗುರುರಾಮವಿಠಲ ದಾಸರ ರಚನೆ 


ಹಸೆಗೆ ಬಾರೊ ಹರುಷಬೀರೊ ಬಿಸಜನಾಭನೇ   


ಶಶಿಯ ಸೋದರಿ ಸಹಿತವಾಗಿ ಶಾಮಲಾಂಗನೇ   ಅ.ಪ


ರತ್ನಖಚಿತ ಪೀಠವಿರಿಸಿ ರಮಣಿ ಮಣಿಯರೂ

ಕುತ್ನಿ ಪಟ್ಟಾವಳಿಯ ಹಾಸಿ ಕೋರಿ ಪ್ರಾರ್ಥಿಪರೂ 

1

ಭೇರಿ ಮೃದಂಗ ನಾಗಸ್ವರ ನಗಾರಿ ಕಹಳೆಗಳ್

ಧಾರುಣಿ ಸುರವೇದ ಘೋಷ ವಿಸ್ತಾರವಾಗಿರಲ್ 

2

ಹಳದಿ ಕುಂಕುಮಾಕ್ಷತೆ ಗಂಧ ಕಳಶ ಕನ್ನಡಿ

ಹೊಳೆಯೆ ತಟ್ಟಿಯೋಳ್ ಸುತ್ತ ಜ್ಯೋತಿ ಬೆಳಗುವುದು 

3

ವಿಧಿ ಶಂಕರರ್ಕೊಡಲು ಕರವನೊದಗಿ ಪಾಶ್ರ್ವದಿ

ಮುದದಿ ನಸು ನಗುತ ಬಲದ ಪದವು ಮುಂದಾಗಿ 

4

ಶರಣ ಜನರಭೀಷ್ಟಗಳನು ಸಲಿಸುವಾತನೇ

ಗುರುರಾಮವಿಠಲ ಸರ್ವೇಶ ಪುರುಷೋತ್ತಮನೆ

5

***