ಕಾಖಂಡಕಿ ಶ್ರೀ ಕೃಷ್ಣದಾಸರು
ಹಿಡಿ ಹಿಡಿರಿಂದು ಸಿಕ್ಕಿದ ಕಳ್ಳನಾ ಬಿಡಬ್ಯಾಡಿರೆಂದಿಗೆ ಹಜ್ಜೆನೆಲಿಗೆ ತಾರನಾ | ಮೈಯ್ಯ ದೋರನಾ ಪ
ಹೃದಯದೋಳಗಿನಾ ಗಂಟವ ಬಿಡುತಾ ಮುದದಿಕುಳ್ಳಿರಲಲ್ಲಿ ಬಂದು ನೋಡುತಾ ಇದರ ಚಿತ್ತ ಪೇಠಾರಿಗೆ ಕೈಯ್ಯಾನೀಡುತಾ ಒದಗಿಕದ್ದೊಯ್ದತಿರಗದೆ ಧನಿ ಮಾಡುತಾಧನಿ ಮಾಡುತಾ 1
ಖೂನ ತನ್ನಯ ಬಲ್ಲಾಸಾಧುಜನವಾ ಕಾಣುತಾರ್ಜಿತ ಶೆಳೆದು ಕೊಂಡು ಧನವಾ ಏನ ಹೇಳಲಿ ಬಿಡನು ಅವರ ಪ್ರಾಣವಾ ವನವಾಕೊಂಡು ಗೋಧನವಾ 2
ಅಡದಾರಿಯಾ ನಡದು ಹೋಗಿ ಬಿದ್ದನಾ ನಡುವೆ ತೊಳಲಿಸುವನು ವಿರುದ್ಧನಾ ಹಿಡಿ ಗುರು ಮಹಿಪತಿ ಪ್ರಭು ಪ್ರಸಿದ್ಧನಾ ಬಿಡದೆ ಭಂಡಾರಕಾಯಲಿಡುವ ಪ್ರಬುದ್ಧನಾ ವಾಜಿಲಿದ್ದನಾ 3
***