ಹೇಗಿದ್ದು ಹೇಗಾದೆಯೊ ಆತ್ಮಯೋಗೀಶನಾನಂದಪುರದಲಿರುವುದ ಬಿಟ್ಟು ಪ
ಬಸಿರ ಹಳ್ಳಿಗೆ ಬಂದು ಮಾಸನೂರಲಿ ನಿಂದುಕುಸುಕಾಡಿ ನುಡಿದು ನೆಲಬಟ್ಟೆವಿಡಿದುಕಿಸುಕದರಿವೆಯ ಪೊದ್ದು ಮಲಮೂತ್ರದಲಿ ಬಿದ್ದುವಸುಧೆಯಲಿ ದಿನಗಳೆದೆಯಲ್ಲ ಆತ್ಮ 1
ಎಳಗೆರೆಯಲಿ ಆಡಿ ಯೌವನದೂರಿಗೆ ಬಂದುಥಳಥಳಿಪ ಹಸ್ತಾದ್ರಿ ನೆಳಲ ಸೇರಿಅಳಲು ಸುತ ಬೆಳೆದು ದಾರಿದ್ರ್ಯ ಪೇಟೆಗೆ ಬಂದುಹಳೆಯ ಬೀಡಿಗೆ ಪಯಣವೇ ಆತ್ಮ 2
ಗನ್ನಗತಕದ ಮಾತು ಇನ್ನು ನಿನಗೇತಕೋಮುನ್ನ ಮಾಡಿದ ಕರ್ಮಭರದೊಡಲಿದೆಉನ್ನತದ ಕಾಗಿನೆಲೆಯಾದಿಕೇಶವ ಸುಪ್ರ-ಸನ್ನ ಮೂರುತಿಯ ಭಜಿಸೆಲೊ ಆತ್ಮ 3
***