Showing posts with label ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ tandevaradagopala vittala. Show all posts
Showing posts with label ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ tandevaradagopala vittala. Show all posts

Thursday, 5 August 2021

ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ ankita tandevaradagopala vittala

 ..

kruti: tandevaradagopala vittala (ಪ್ರಹ್ಲಾದಗೌಡರು)


ಹೊಡೀ ನಗಾರಿ ಮೇಲೆ ಕೈಯಾ ಕಡ ಕಡ ಪ


ದೃಢಮತಿಯಲಿ ಕಡು ವಾದಿರಾಜರು ರುಜುಗುಣಪರೆಂದ್ಹೊಡೇ ಅ.ಪ.


ಕಾಮನಯ್ಯನ ನೇಮದಿ ಸ್ಮರಿಸುವ ಕಾಮರಹಿತ ನಿಷ್ಕಾಮ ಕರೆವರೆಂದ್ಹೊಡೀ 1

ಅವನಿಯೊಳಗೆ ತಾ ಬಂಧುರ ಕುಲೇಂದ್ರಿನಿ ಗೊಲಿದವ ನಿಂದ್ಯಂದ್ಯರೆಂದೊಡಿ2

ಮೋದ ಮುನಿಯ ಮತ ಮೋದದಿ ಸಾಧಿಪ ಸದ್ವಾದಿರಾಜ ಗುರು ಮೋದತೀರ್ಥರು ಸಮರೆಂದ್ಹೊಡಿ 3

ಕಲಿಕುಲಜೈಸಿ ಸತ್ಕವಿಕುಲ ಪೋಷಿಸಿಯತಿಕುಲಭೂಷಿಪ ವರಶುಕ್ಲ ಶೋಣಿತ ಶೂನ್ಯರಿವತೆಂದ್ಹೊಡಿ4

ಕಾಮಿನಿಗೋಸುಗ ಪ್ರೇಮದಿ ಕುಸುಮವ ತಂದಿಟ್ಟತುಳ ಭೀಮನ ಸರಿಸಮರಿವತೆಂದ್ಹೊಡಿ 5

ಸೀತೆಯಗೋಸುಗ ಸೇತುವೆಗಟ್ಟಿದ ರಘುನಾಥನ ಪ್ರೀತಿಯ ಘನವಾತನಪದ ಪೊಂದುವರೆಂದ್ಹೊಡಿ 6

ಇಂದಿರೇಶನ ಪದಮಂದಿರದಲಿ ಭಜಿಸುವ ನಂದಿವಾಹ ಮುಖವೃಂದ ವಂದ್ಯರೆಂದ್ಹೊಡಿ 7

ವೃಂದಾವನದೊಳು ಕೂತುಚ್ಛಂದದಿ ದ್ವಿಜರಿಗೆ ಬೋಧಿಪರಿವರೆಂದ್ಹೊಡಿ 8

ಕಂತುವಿನಲಿ ತಾನಿಂತು ಜಪಿಸುವ ತಂದೆವರದಗೋಪಾಲವಿಠಲನ ಪ್ರೀತಿಮಂತ್ರಿಯೆನಿಪವರೆಂದೊಡಿ 9

***